ಉತ್ತರ ಕರ್ನಾಟಕ ಪ್ರತ್ಯೇಕ ರಾಜ್ಯ ಹೋರಾಟ ಅನಿವಾರ್ಯ: ಡಾ. ಎ.ಎಸ್. ಭದ್ರಶೆಟ್ಟಿ - ಉತ್ತರಕರ್ನಾಟಕ ಹೋರಾಟ ಸಮಿತಿ

Breaking

ಉತ್ತರಕರ್ನಾಟಕ ಹೋರಾಟ ಸಮಿತಿ

ಉತ್ತರಕರ್ನಾಟಕ ಹೋರಾಟ ಸಮಿತಿ

students

Post Top Ad

Responsive Ads Here

ಉತ್ತರ ಕರ್ನಾಟಕ ಪ್ರತ್ಯೇಕ ರಾಜ್ಯ ಹೋರಾಟ ಅನಿವಾರ್ಯ: ಡಾ. ಎ.ಎಸ್. ಭದ್ರಶೆಟ್ಟಿ

ಉದಯನಾಡು ಸುದ್ದಿಯಲ್ಲಿ ಡಾ. ಎ.ಎಸ್. ಭದ್ರಶೆಟ್ಟಿ ಯವರ ಹೇಳಿಕೆ


ಕಲಬುರಗಿ: ಬೆಳಗಾವಿಯನ್ನು ಕರ್ನಾಟಕದ ಎರಡನೆ ರಾಜಧಾನಿಯನ್ನಾಗಿ ಮಾಡಬೇಕು. ಸುವರ್ಣ ವಿಧಾನಸೌಧದಲ್ಲಿ ಪೂರ್ಣಾವಧಿ ಅಧಿವೇಶನ ನಡೆಸಬೇಕು ಎಂದು ಉತ್ತರ ಕರ್ನಾಟಕ ಪ್ರತ್ಯೇಕ ರಾಜ್ಯ ಹೋರಾಟ ಸಮಿತಿ ಜಿಲ್ಲಾ ಘಟಕದ ಅಧ್ಯಕ್ಷ ಡಾ. ಎ.ಎಸ್. ಭದ್ರಶೆಟ್ಟಿ ಒತ್ತಾಯಿಸಿದರು.

ಈ ಭಾಗದ ಹಲವು ಬೇಡಿಕೆಗಳಿಗೆ ಒತ್ತಾಯಿಸಿ ಅನೇಕ ಬಾರಿ ಮನವಿ ಸಲ್ಲಿಸಲಾಗಿದ್ದರೂ ಯಾವ ಸರ್ಕಾರಗಳೂ ನಮ್ಮ ಬೇಡಿಕೆಗಳನ್ನು ಪರಿಗಣಿಸಿಲ್ಲ ಎಂದು ಶನಿವಾರ ಸುದ್ದಿಗೋಷ್ಠಿಯಲ್ಲಿ ಆರೋಪಿಸಿದರು.

ರಾಜ್ಯ ಸರ್ಕಾರ ನ್ಯಾಯಯುತ ಬೇಡಿಕೆಗಳನ್ನು ಈಡೇರಿಸದಿದ್ದಲ್ಲಿ ಪ್ರತ್ಯೇಕ ರಾಜ್ಯ ಹೋರಾಟ ಅನಿವಾರ್ಯ ಎಂದು ಅವರು ಹೇಳಿದರು.

371 (ಜೆ) ಕಾಯ್ದೆಯನ್ನು ಸಮರ್ಪಕವಾಗಿ ಅನುಷ್ಠಾನಗೊಳಿಸಬೇಕು. ಕೃಷ್ಣಾ ಮೆಲ್ದಂಡೆ, ಕಳಸಾ ಬಂಡೂರಿ, ಮಹದಾಯಿ ಯೋಜನೆಗಳನ್ನು ಸಕಾಲದಲ್ಲಿ ಪೂರ್ಣಗೊಳಿಸಬೇಕು ಎಂದು ಆಗ್ರಹಿಸಿದರು.

ಬದಾಮಿಯಲ್ಲಿ ಲಲಿತಕಲಾ ಅಕಾಡೆಮಿ, ಬಾಗಲಕೋಟೆಯಲ್ಲಿ ಕಬ್ಬು ಅಭಿವೃದ್ಧಿ ಮಂಡಳಿ ಸ್ಥಾಪಿಸಬೇಕು ಎಂದು ಒತ್ತಾಯಿಸಿದರು. ಕಾರ್ಯದರ್ಶಿ ಗುರು ಮುಕರಂಬಿ, ಗೌರವ ಸಲಹೆಗಾರ ಶಿವರಾಜ ಪಾಟೀಲ ಇದ್ದರು.

Post Top Ad

Responsive Ads Here